ಮಡಿಕೇರಿ: ಮಳೆಗಾಲದಲ್ಲಿ ಕಾಳುಮೆಣಸು, ಅಡಕೆ ಮುಂತಾದ ಬೆಳೆಗಳಿಗೆ ತಗಲುವ ಶಿಲೀಂಧ್ರ ರೋಗಗಳನ್ನು ಮುಂಜಾಗ್ರತೆಯಾಗಿ ತಡೆಗಟ್ಟಲು ಬೋರ್ಡೊ ದ್ರಾವಣವನ್ನು ಸಿಂಪಡಿಸುವ ಬಗ್ಗೆ ಪೊನ್ನಂಪೇಟೆ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷ ಣಾ ತಜ್ಞ ಡಾ. ವೀರೇಂದ್ರ ಕುಮಾರ್ ಸಲಹೆ ನೀಡಿದ್ದಾರೆ. ಬೋರ್ಡೊ ದ್ರಾವಣ ಅಪಾಯಕಾರಿಯಲ್ಲದ ಬಹಳ ಉಪಯುಕ್ತವಾದ ಶಿಲೀಂಧ್ರನಾಶಕ. ಆದರೆ, ಇದನ್ನು ವೈಜ್ಞಾನಿಕವಾಗಿ ತಯಾರಿಸುವ ವಿಧಾನದಲ್ಲಿ ತಪ್ಪುಗಳಾದರೆ ರಸಸಾರದಲ್ಲಾಗುವ ವ್ಯತ್ಯಾಸದಿಂದ ಸಸ್ಯರೋಗಗಳು ಸಮರ್ಪಕವಾಗಿ ನಿರ್ವಹಣೆಯಾಗುವುದಿಲ್ಲ. ಅಲ್ಲದೇ, ತಟಸ್ಥ ರಸಸಾರವಿಲ್ಲದ ದ್ರಾವಣವನ್ನು ಬೆಳೆಗಳ ಮೇಲೆ ಸಿಂಪರಣೆ ಮಾಡಿದಲ್ಲಿ ಎಲೆಗಳು ಸುಟ್ಟು ದುಷ್ಪರಿಣಾಮವಾಗುವುದು. ಆದ್ದದರಿಂದ ವೈಜ್ಞಾನಿಕ ಪದ್ಧತಿಯಲ್ಲಿ ಬೋರ್ಡೊ ದ್ರಾವಣವನ್ನು ತಯಾರಿಸಿ ಸಿಂಪರಣೆ ಕೈಗೂಳ್ಳುವುದು ಪ್ರಸ್ತುತದಲ್ಲಿ ಅವಶ್ಯಕ ಎಂದು ಹೇಳಿದ್ದಾರೆ. ಕೆಲವು ಪ್ರದೇಶಗಳಲ್ಲಿ ಕೃಷಿಕರು ಮೈಲುತುತ್ತ್ತ, ಸುಣ್ಣ ಮತ್ತು ನೀರನ್ನು ಲೆಕ್ಕಾಚಾರದಲ್ಲಿ ಬೆರಸದೆ, ದ್ರಾವಣದ ರಸಸಾರವನ್ನು (ಪಿ.ಎಚ್) ಪರೀಕ್ಷಿಸದೆ ಸಿಂಪರಣೆ ಮಾಡಿ ರೋಗದ ಹತೋಟಿಯಲ್ಲಿ ಯಶಸ್ಸು ಕಾಣದೆ ಆರ್ಥಿಕ ನಷ್ಟವನ್ನು ಅನುಭವಿಸುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ. ಮೈಲುತುತ್ತ ಅಂದರೆ ಶುದ್ಧ ತಾಮ್ರವನ್ನು ಗಂಧಕಾಮ್ಲದಲ್ಲಿ ಉಪಚರಿಸಿ ಅದನ್ನು ಹರಳು ರೂಪಕ್ಕೆ ತರಲಾದ ಉತ್ಪನ್ನ. ತಾಮ್ರವು ಶಿಲೀಂಧ್ರಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತ...
This is blog site for Indian digital farmer in this blog information is given in kannada, English, Hindi, Telugu,Tamil and Malayalam language to help farmers to know about technology and farmers can grow economically strong